ಬಿಗ್ ಬ್ರೇಕಿಂಗ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್!!!!!

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ನೀಡಬೇಕೆಂದು ಕಳೆದ ಹಲವಾರು ದಿನಗಳಿಂದ ರಾಜ್ಯವಾಪಿಯಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಫಲಶೃತಿ ದೊರದಂತಾಗಿದೆ. ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಖಾಸಗಿ ಸಂಸ್ಥೆಯಲ್ಲಿ ಲಕ್ಷಾಂತರ ರೂಪಾಯಿಗಳನ್ನು ಕೊಟ್ಟು ವಿದ್ಯಾಭ್ಯಾಸ ಮಾಡುವವರಿಗೆ ಉಚಿತ ಬಸ್ ಪಾಸ್ ನ ಅಗತ್ಯವಿಲ್ಲ. ಅದ್ದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ ಮಾತ್ರ ಉಚಿತ ಬಸ್ ಪಾಸ್ ಭಾಗ್ಯವನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.

Comments