ಬಿಗ್ ಬ್ರೇಕಿಂಗ್ ನ್ಯೂಸ್: ಪ್ರಚಾರಕ್ಕೆ ಹೋದ ಕಾಂಗ್ರೆಸ್ ಅಭ್ಯರ್ಥಿಗೆ ಚಪ್ಪಲಿಯಿಂದ ಹೊಡೆಯಲು ಮುಂದಾದ ಮಹಿಳೆ

ಕೊಪ್ಪಳ: ಸ್ಥಳಿಯ ಸಂಸ್ಥೆಗಳ ಚುನಾವಣಾಗೆ ಪ್ರಚಾರಕ್ಕೆ ತೆರಳಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆಯಲು ಮುಂದಾದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿಯ 20 ನೇ ವಾರ್ಡ್ ನಲ್ಲಿ ಈ ಘಟನೆ ನಡೆದಿದ್ದು, ಪ್ರಚಾರಕ್ಕೆ ತೆರಳಿದ್ದ ಕಾಂಗ್ರೆಸ್ ಅಭ್ಯರ್ಥಿ ದ್ಯಾಮಣ್ಣ ಡೊಳ್ಳಿನ್ ಗೆ ಮಹಿಳೆ ಚಪ್ಪಲಿಯಿಂದ ಹೊಡೆಯಲು ಮುಂದಾಗಿದ್ದಾರೆ. ತಮ್ಮ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ನೀಡಿಲ್ಲವೆಂದು ಮಹಿಳೆಯ ಆರೋಪವಾಗಿದೆ.

ಮಹಿಳೆ ಕೈಯಲ್ಲಿ ಚಪ್ಪಲಿ ಹಿಡಿದುಕೊಂಡು ಬರುತ್ತಿದ್ದಂತೆ ಸ್ಥಳದಲ್ಲಿದ್ದ ಕೆಲ ಕಾಂಗ್ರೆಸ್ ಕಾರ್ಯಕರ್ತರು ತಡೆಯಲು ಮುಂದಾದ್ರು, ಈ ವೇಳೆ ದ್ಯಾಮಣ್ಣ ಡೊಳ್ಳಿನ ನಮಗೆ ಮೋಸ ಮಾಡಿದ್ದಾನೆ ಎಂದು ಹೇಳುತ್ತಾ ಹಲ್ಲೆಗೆ ಮುಂದಾಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಆಕೆಯನ್ನು ತಡೆದಿದ್ದಾರೆ.

Comments